ಜಿಪಂ, ತಾಪಂ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

0
29

ವಿಜಯಪುರ: ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದಕ್ಕಾಗಿ ಎಲ್ಲ ಬ್ಲಾಕ್ ಅಧ್ಯಕ್ಷರು ಈಗಲೇ ಕಾರ್ಯಪ್ರವೃತ್ತರಾಗಬೇಕು. ಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೆ ಪಕ್ಷ ತಳಮಟ್ಟದಿಂದ ಸಂಘಟನಾತ್ಮಕವಾಗಿ ಬಲಿಷ್ಠವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ವಿವಿಧ ಬ್ಲಾಕ್ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ವಿವಿಧ ಸಮಿತಿಗಳನ್ನು ಆದಷ್ಟು ಬೇಗನೆ ಪುನಾರಚಿಸಬೇಕೆಂದು ಸೂಚಿಸಿದರು.
ಬೆಳಗಾವಿ ವಿಭಾಗದ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಾಲನಿಯಪ್ಪನ್ ಮಾತನಾಡಿ, ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಪಕ್ಷ ಹಿಂದೆ ಬೀಳಬಾರದು. ಬೂತ್ ಮಟ್ಟದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಈ ನಾಡಿಗೆ ಕಾಂಗ್ರೆಸ್ ನೀಡಿದ ಕೊಡುಗೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಧಾಕರ ಬಡಿಗೇರ, ದಯಾನಂದ ಪಾಟೀಲ, ಡಾ.ಪ್ರಭುಗೌಡ ಲಿಂಗದಳ್ಳಿಯವರು ವೇದಿಕೆಯಲ್ಲಿದ್ದರು.

Previous articleಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ
Next articleಹನಿಟ್ರ್ಯಾಪ್ ಪ್ರಕರಣ: ಗೃಹ ಸಚಿವರನ್ನು ಭೇಟಿಯಾದ ಕೆ.ಎನ್ ರಾಜಣ್ಣ