ಜಿಲ್ಲಾ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ

0
29

ದಾವಣಗೆರೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಚಿಗಟೇರಿ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆಯ ಆವರಣ, ರೋಗಿಗಳ ವಾಡ್೯ಗಳಿಗೆ ಭೇಟಿ ನೀಡಿದ ಡಾ.ನಾಗಲಕ್ಷ್ಮೀ ಚೌಧರಿ, ಅಲ್ಲಿನ ಸ್ವಚ್ಛತೆ, ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ ಇಲ್ಲದನ್ನು ಕಂಡು ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಗರಂ ಆದರು. ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ಡಿಎಚ್ ಒ ಡಾ.ಷಣ್ಮುಖಪ್ಪ ಸೇರಿದಂತೆ ವೈದ್ಯರು ಹಾಜರಿದ್ದರು.

Previous articleಹುಬ್ಬಳ್ಳಿ ಎನ್‌ಕೌಂಟರ್‌ ಪ್ರಕರಣ: ಮಧ್ಯಾಹ್ನ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ
Next articleಗಣತಿ ಗ್ಯಾರಂಟಿಗೆ ನನ್ನ ಒಪ್ಪಿಗೆ ಇಲ್ಲ