Home Advertisement
Home ಅಪರಾಧ ಜಿಲ್ಲಾ ಆಸ್ಪತ್ರೆ ಮಕ್ಕಳ ತಜ್ಞ ಕಿಡ್ನಾಪ್: 3 ಕೋಟಿಗೆ ಬೇಡಿಕೆ

ಜಿಲ್ಲಾ ಆಸ್ಪತ್ರೆ ಮಕ್ಕಳ ತಜ್ಞ ಕಿಡ್ನಾಪ್: 3 ಕೋಟಿಗೆ ಬೇಡಿಕೆ

0
161

ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಿದ್ದು, ಮೂರು ಕೋಟಿ ರೂಪಾಯಿಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನುಅಪಹರಣ ಮಾಡಿರುವ ಘಟನೆ ನಡೆದಿದೆ.
ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಿದ್ದು, ಮೂರು ಕೋಟಿ ರೂಪಾಯಿಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ. ಇವರ ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ. ಅಪಹರಣಕ್ಕೆ‌ ಒಳಗಾದ ಡಾ ಸುನೀಲ್ ಅವರ ಪೋನ್‌ನಿಂದಲೇ ಕರೆ ಮಾಡುತ್ತಿರುವ ಕಿಡ್ನಾಪರ್ಸ್ ಹಣಕ್ಕೆ ಬೇಡಿಕೆ ಇಟ್ಟಿದ್ದು. ಕಿಡ್ನಾಪರ್ಸ್ ಪತ್ತೆಗಾಗಿ ಬಳ್ಳಾರಿ ಎಸ್ಪಿ ಡಾ.ಶೊಭರಾಣಿ ವಿಜೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.