Home ಅಪರಾಧ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಳವು

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಳವು

0

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳವು ನಡೆದಿರುವ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಸಚಿವರ ಖಾಸಗಿ ಆಪ್ತ ಸಹಾಯಕ ಮೋಗಣ್ಣ ಅವರ ಬ್ಯಾಗ್ ಕಳ್ಳತನವಾಗಿದ್ದು, ಅದರಲ್ಲಿ ಫೈಲ್, ಖಾಸಗಿ ಡಾಕ್ಯುಮೆಂಟ್, 15 ಸಾವಿರ ರೂ. ನಗದು ಇತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೋಗಣ್ಣ ನಗರದ ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದಾಗ ಕಳ್ಳರ ಕೈಚಳಕ ಪ್ರದರ್ಶಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಪ್ರವಾಸಿ ಮಂದಿರದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೆಟ್ಟು ಹೋಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version