ಬಿಜೆಪಿ ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಪ್ರತಿಭಟನೆ
ಕೊಪ್ಪಳ: ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಶೋಕ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರ, ಬಿಜೆಪಿ ಪಕ್ಷ, ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಮುಖಂಡರಾದ ಶಾಂತಣ್ಣ ಮುದಗಲ್, ನವೋದಯ ವಿರುಪಣ್ಣ, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿಶ್ರೀನಿವಾಸ್, ರಮೇಶ ನಾಯಕ, ಶರಣಪ್ಪ ಸಜ್ಜನ್, ಇಂದಿರಾ ಬಾವಿಕಟ್ಟಿ, ಕಿಶೋರಿ ಬೂದನೂರು, ಮಲ್ಲು ಪೂಜಾರ, ಕುಬೇರ್ ಮಜ್ಜಿಗಿ ಇದ್ದರು.