ಜಿಲ್ಲಾ ಕಾರಾಗೃಹಕ್ಕೆ ಉಪಲೋಕಾಯುಕ್ತ ಭೇಟಿ

0
21

ತುಮಕೂರು: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ ವೀರಪ್ಪ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿ ಯಾವುದೊ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗಿದ್ದೀರಿ. ಇನ್ನು ಮುಂದೆ ಮನಃ ಪರಿವರ್ತನೆ ಮಾಡಿಕೊಂಡು ಸರಿ ದಾರಿಯಲ್ಲಿ ನಡೆದು ಸತ್ಪ್ರಜೆಗಳಾಗಬೇಕು ಎಂದು ಬುದ್ಧಿ ಮಾತುಗಳನ್ನು ಹೇಳಿದರು.

ಜೈಲಿನಲ್ಲಿರುವ ಖೈದಿಗಳ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ಗುಣ ಮಟ್ಟ ಪರಿಶೀಲಿಸಿದರು. ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಲೋಕಾಯುಕ್ತ ಅಧೀಕ್ಷಕ ಎ ವಿ ಲಕ್ಷ್ಮೀ ನಾರಾಯಣ, ಜೈಲಿನ ಅಧೀಕ್ಷಕ ಮಲ್ಲಿಕಾರ್ಜುನ ಎಸ್ ಮಾಳಿ ಉಪಸ್ಥಿತರಿದ್ದರು

Previous articleದೇಹ, ವಾಕ್, ಮನಸ್ಸಿನ ಶುದ್ಧತೆ
Next articleಗಾಯತ್ರಿ ಮಹಾಯಾಗ: ಆಹ್ವಾನ ಪತ್ರಿಕೆ ಬಿಡುಗಡೆ