ಕೊಪ್ಪಳ: ನಗರದ ಹಾಲವರ್ತಿ ರಸ್ತೆಯ ಜಿಲ್ಲಾ ಕಾರಾಗೃಹಕ್ಕೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಾರಾಗೃಹದ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಊಟ, ಭದ್ರತಾ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳು ಹೀಗೆ ಪ್ರತಿ ವಿಭಾಗದಲ್ಲಿಯೂ ಪರಿಶೀಲನೆ ನಡೆಸಿ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ತಾಕೀತು ಮಾಡಿದರು.
ಕಾರಾಗೃಹದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಭದ್ರತಾ ಮಂಡಳಿ ಸಭೆ ನಡೆಯುತ್ತದೆ. ಭದ್ರತಾ ಉಪಕರಣಗಳು, ಸಿಬ್ಬಂದಿ ಕಾರ್ಯವೈಖರಿ ಎಲ್ಲವನ್ನೂ ರಾಮ್ ಅರಸಿದ್ಧಿ ಪರಿಶೀಲಿಸಿದರು. ಬಂದಿಗಳಿಗೆ ನಿಷೇಧಿತ ವಸ್ತುಗಳು ಸಿಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.