ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು
ಬೆಂಗಳೂರು: ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ & ತಾಲ್ಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ ನಡೆಸಸಿತು, ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ. ಅದರ ಬಳಿಕ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ನಿಗದಿಪಡಿಸಬಹುದು ಎಂದು ಸರ್ಕಾರ ಹೇಳಿದೆ. ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡು ಹೈಕೋರ್ಟ್, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲರು ಹೇಳಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ತಿಳಿಸಿದ್ದಾರೆ.