ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಸಭಾಧ್ಯಕ್ಷ

0
41

ಮಂಗಳೂರು: ಬಜ್ಪೆ ಕೊಲೆ ಪ್ರಕರಣ,ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

ಮನಗಳೂರಿನ ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಎಂಬವರ ಕೊಲೆ ನಡೆದಿದ್ದು ,ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ,ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.

Previous articleಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಬಹುತೇಕ ಸ್ತಬ್ಧ
Next articleಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ: ಸುಳ್ಯದಲ್ಲಿ ಸಂಪೂರ್ಣ ಬಂದ್