ಮಂಡ್ಯ: ತಾಲ್ಲೂಕಿನ ಕೆರಗೋಡು ಹೋಬಳಿಯ ಜಿ ಕೆಬ್ಬಳಿಯ ಆಲೆಮಾನೆಯಲ್ಲಿ ಪಟಾಕಿ ಸಿಡಿಮದ್ದಿನ ಅಗ್ನಿ ಅವಘಡದಿಂದಾಗಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ನಾಗಲಿಂಗ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಆಲೆಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.