ಜಿ7 ಶೃಂಗಸಭೆ: ಇಟಲಿ ತಲುಪಿದ ಪ್ರಧಾನಿ ಮೋದಿ

0
7

ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿತಲುಪಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಇಟಲಿಯಲ್ಲಿನ ಭಾರತದ ರಾಯಭಾರಿ ವಾಣಿ ರಾವ್ ಮತ್ತು ಇತರ ಅಧಿಕಾರಿಗಳು ಬರಮಾಡಿಕೊಂಡರು. ಬೋರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ವಿಶ್ವದ ಗಣ್ಯ ನಾಯಕರ ಜೊತೆಗೆ ಜನರ ಜೀವನ ಸುಧಾರಿಸುವ ಹಾಗೂ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ-ಮೆಡಿಟರೇನಿಯನ್ ವಿಷಯ ಸೇರಿದಂತೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಪೋಪ್ ಫ್ರಾನ್ಸಿಸ್ ಅವರು ಸಹ ಇರಲಿದ್ದಾರೆ.

Previous articleದುರಾಡಳಿತ ಮರೆಮಾಚಲು ಇಲ್ಲ ಸಲ್ಲದ ಪ್ರಕರಣ
Next articleಭಾನುವಾರದಂದು ಬದಲಾದ ಸಮಯದಲ್ಲಿ ನಮ್ಮ ಮೆಟ್ರೋ