ಜುಲೈ 31ಕ್ಕೆ ಕೊನೆಯಾಗಲಿದೆ OTS ಯೋಜನೆ

0
19

ಬೆಂಗಳೂರು: OTS ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ.
ಬೆಂಗಳೂರಿನ ಆಸ್ತಿ ಮಾಲೀಕರು ಈ ಕುರಿತು ಗಮನ ಹರಿಸಿ ಬಡ್ಡಿ ಮನ್ನಾ ಅವಕಾಶದ ಸದುಪಯೋಗ ಪಡೆದುಕೊಳ್ಳಬಹದು, ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುತ್ತಿದ್ದು. ಬೆಂಗಳೂರಿನ ನಾಗರಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ. ಆನ್‌ಲೈನ್‌ ಮೂಲಕ ಪಾವತಿಸಲು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ https://bbmptax.karnataka.gov.in
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ತಿಳಿಸಿದೆ.

Previous articleಮಾಜಿ ಸಚಿವ ನಾಗೇಂದ್ರ 6 ದಿನ ಇ ಡಿ ಕಸ್ಟಡಿಗೆ
Next articleಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ