ಜೆಡಿಎಸ್​​ನಿಂದ ಸಿಎಂ ಇಬ್ರಾಹಿಂ ಅಮಾನತು

0
15
ಇಬ್ರಾಹಿಂ

ಬೆಂಗಳೂರು: ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್​​ ಪಕ್ಷದಿಂದ ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಜತೆಗಿನ ಮೈತ್ರಿ ನಿರ್ಧಾರ ತೆಗೆದುಕೊಂಡ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಅಲ್ಲದೇ ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಹೀಗಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್​.ಡಿ. ದೇವೇಗೌಡರು ಆದೇಶದಲ್ಲಿ ತಿಳಿಸಿದ್ದಾರೆ.

Previous articleಸರ್ಕಾರ ರೈತರಿಗೆ ಬರ ಪರಿಹಾರ ನೀಡಲಿ
Next articleದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ