ಟೀಂ ಇಂಡಿಯಾದ ಮಾಜಿ ನಾಯಕ ನಿಧನ

0
18

ನವದೆಹಲಿ: ದತ್ತಾಜಿರಾವ್ ಗಾಯಕ್ವಾಡ್ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
“ಟೀಂ ಇಂಡಿಯಾ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿದ ಅನುಭವಿ ಕ್ರಿಕೆಟಿಗ, 1959 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದ ದತ್ತಾಜಿರಾವ್ ಗಾಯಕ್ವಾಡ್ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾರತದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗರೂ ಆಗಿದ್ದ ದತ್ತಾಜಿರಾವ್ ಅವರ ನಾಯಕತ್ವದಲ್ಲಿ, ಬರೋಡಾ ತಂಡ 1957-58ರಲ್ಲಿ ರಣಜಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. 1952ರಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಕ್ರಿಕೆಟ್ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

Previous articleರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ
Next articleಹೋರಾಟದ ನೆನಪಾಗಿ ಒಮ್ಮೆಗೆ ಕಣ್ಣಲ್ಲಿ ನೀರು ತುಂಬಿ ಬಂತು…