ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಅವರ ಪತ್ನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಸಮನ್ಸ್ ಜಾರಿ ಮಾಡಿದ್ದು, ಮೂರು ದಿನದೊಳಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಅವರ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದು, 3 ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ಹಾಜರಾಗಲು ಸೂಚಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅತುಲ್ ಸುಭಾಷ್, ತನ್ನ ಪತ್ನಿ ಮತ್ತು ಆಕೆಯ ಕುಟುಂಬದವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಂತೆ 24 ಪುಟಗಳ ಸೂಸೈಡ್ ನೋಟ್ ಬರೆದಿದ್ದಾರೆ ಎಂದು ವರದಿಯಾಗಿದೆ. ಇನ್ನು ಅತುಲ್ ಸಹೋದರ ಬಿಕಾಸ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.