ಟೈರ್ ಸ್ಪೋಟ: ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

0
46

ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು

ರಾಯಚೂರು: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ತಡರಾತ್ರಿ 10:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹಯವದನ(18), ಸುಜಯೇದ್ರ (22) ಹಾಗೂ ಅಭಿಲಾಷ್(20) ಮತ್ತು ಕ್ರೂಸರ್ ಚಾಲಕ ಕಂಸಾಲಿ ಶಿವ (24) ಮೃತಪಟ್ಟವರು ಎಂದು ತಿಳಿದುಬಂದಿದೆ. 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಘಾಟ್ ಬಳಿ ಭೀಕರ ಅಪಘಾತ: 9 ಕ್ಕೂ ಹೆಚ್ಚು ಮಂದಿ ಸಾವು!
Next articleಎರಡು ಪ್ರತ್ಯೇಕ ಅಪಘಾತ : ಸಂತಾಪ ಸೂಚಿಸಿದ ಸಿಎಂ