ಟ್ಯಾಂಕರ್ ಮೂಲಕ ತಿರುಪತಿಗೆ ನಂದಿನಿ ತುಪ್ಪ

0
23

ಬೆಂಗಳೂರು: ತಿರುಪತಿ ತಿರುಮಲ ದೇವಾಲಯಕ್ಕೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ತಿರುಪತಿಯಲ್ಲಿ ತಯಾರಾಗುವ ಲಡ್ಡು ಪ್ರಸಾದ ಮೊದಲಿನಂತೆ ಇಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಅಲ್ಲಿ ಬಳಕೆ ಮಾಡಲಾಗುತ್ತಿದ್ದ ತುಪ್ಪದ ಗುಣಮಟ್ಟ ನಂದಿನಿ ತುಪ್ಪದಷ್ಟು ಇಲ್ಲ ಎಂಬ ಮಾತುಗಳೂ ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಮತ್ತೆ ಕೆಎಂಎಫ್ ಜೊತೆ ಒಪ್ಪಂದ ಮಾಡಿಕೊಂಡಿದೆ.
ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹಲವಾರು ವರ್ಷಗಳಿಂದ ಅಸ್ಮಾರ್ಕ್ ಸ್ಪೇಷಲ್ ಗ್ರೇಡ್ ಹೊಂದಿರುವ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಪವಿತ್ರ ಶ್ರೀವಾರಿ ಪ್ರಸಾದ ತಯಾರಿಕೆಗೆ ಸುಮಾರು ೫ ಸಾವಿರ ಟನ್ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಕೆಲವು ಕಾರಣಗಳಿಂದ ಹಲವಾರು ವರ್ಷಗಳಿಂದ ಸ್ಥಗಿತವಾಗಿತ್ತು.
ಈಗ ಮತ್ತೆ ಟೆಂಡರ್ ಮೂಲಕ ಪ್ರಾರಂಭಿಕವಾಗಿ ೩೫೦ ಮೆಟ್ರಿಕ್ ಟನ್ ತುಪ್ಪವನ್ನು ದೇವಾಲಯಕ್ಕೆ ಸರಬರಾಜು ಮಾಡಲಾಗುತ್ತಿದೆ.
ಸಮಾರಂಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಮತ್ತಿತರರಿದ್ದರು.

Previous articleಎನ್‌ಐಎ ಅಧಿಕಾರಿಗಳಿಂದ ಮೂವರು ವಶಕ್ಕೆ
Next articleಹತ್ತು ವಿವಿಗಳಿಗೆ ಸಿಂಡಿಕೇಟ್ ಸದಸ್ಯರ ನಾಮ ನಿರ್ದೇಶನ