ಕೊಪ್ಪಳ: ರಾಜ್ಯ ಸರ್ಕಾರದ ಬಜೆಟ್ ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಟ್ರ್ಯಾಕ್ಟರ್ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸಗೂರು, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಚಂದ್ರಶೇಖರ ಕವಲೂರು, ನೀಲಕಂಠಯ್ಯ ಹಿರೇಮಠ, ಮಹಾಲಕ್ಷ್ಮಿ ಕಂದಾರಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ, ನಗರಾಧ್ಯಕ್ಷ ರಮೇಶ ಕವಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹೆಸರೂರು, ನರಸಿಂಹರಾವ್ ಕುಲಕರ್ಣಿ, ಶಿವು ಅರಕೇರಿ, ರಾಜು ಬಾಕಳೆ, ಕೀರ್ತಿ ಪಾಟೀಲ್ ಇದ್ದರು.