Home ತಾಜಾ ಸುದ್ದಿ ಡಾ. ವೀಣಾ ಶಾಂತೇಶ್ವರ ಸೇರಿ ಇಬ್ಬರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ ಸೇರಿ ಇಬ್ಬರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

0

ಧಾರವಾಡ: ವರಕವಿ ಡಾ. ದ.ರಾ. ಬೇಂದ್ರೆಯವರ ೧೨೯ನೇ ಜನ್ಮದಿನದ ನಿಮಿತ್ತ ನವೋದಯ ಸಾಹಿತಿ ಡಾ. ವೀಣಾ ಶಾಂತೇಶ್ವರ ಮತ್ತು ಬೆಂಗಳೂರಿನ ಕಬಿ, ವಿಮರ್ಶಕ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಜ. ೩೧ರಂದು ಸಾಧನಕೇರಿಯ ಬೇಂದ್ರೆ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಬ್ಬರು ಸಾಹಿತಿಗಳಿಗೆ ತಲಾ ೫೦ ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತಿದೆ ಎಂದು ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Exit mobile version