ಡಿಕೆಶಿ ಪ್ರಕರಣ ೧೮ಕ್ಕೆ ವಿಚಾರಣೆ

0
6
ಡಿಕೆಶಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಕುರಿತಂತೆ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ಕುರಿತಂತೆ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ ೧೮ಕ್ಕೆ ಮುಂದೂಡಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ವಾಪಸ್ ತೆಗೆದುಕೊಂಡಿರುವ ಕುರಿತು ಸಿಬಿಐ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಕುರಿತಂತೆ ಹೈಕೋರ್ಟ್ನಲ್ಲಿ ನ್ಯಾ. ಸೋಮಶೇಖರ್ ನ್ಯಾ ಉಮೇಶ್ ಅಡಿಗ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸುತ್ತಿದ್ದು, ಸಿಬಿಐ ಪರ ವಿಶೇಷ ಪ್ರಸನ್ನ ಕುಮಾರ್ ವಾದ ಮಂಡಿಸಿ, ತನಿಖೆಗೆ ಸಮ್ಮತಿ ನೀಡಿ ವಾಪಸ್ ಪಡೆದ ಸರ್ಕಾರದ ಕ್ರಮ ಕಾನೂನು ಬಾಹಿರವೆಂದು ವಾದ ಮಂಡಿಸಿದರು.
೨೦೨೦ರ ಅಕ್ಟೋಬರ್ ಮೂರರಿಂದಲೂ ಸಿಬಿಐ ತನಿಖೆ ಅರ್ಜಿ ವಿಚಾರಣೆ ನಡೆಯುತ್ತಿದೆ. ಈಗಲೂ ತನಿಖೆ ಪ್ರಗತಿಯಲ್ಲಿದೆ ಎಂದು ಸಿಬಿಐ ಪರ ವಕೀಲರ ವಾದವಾಗಿದೆ. ಸಿಬಿಐ ಪರ ವಾದವನ್ನು ಆಲಿಸಿದ ನಂತರ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ ೧೮ಕ್ಕೆ ಮುಂದೂಡಿದೆ.

Previous articleಮುಸಾವೀರ್ ಹುಸೇನ್ ಪ್ರಮುಖ ಆರೋಪಿ
Next articleಆತಿಶಿಗೆ ಆಯೋಗದ ನೋಟಿಸ್