Home News ಡಿಕೆಶಿ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಡಿಕೆಶಿ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.
ಈ ಕುರಿತಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಒತ್ತಾಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧ, ರಾಜಕೀಯ ವೈಷಮ್ಯದ ಕಾರಣಕ್ಕೆ ಕುಣಿಗಲ್ ರೈತನ ತೋಟಕ್ಕೆ ಬೆಂಕಿ ಹಚ್ಚಿರುವವರ ವಿರುದ್ಧ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಕಲಬುರ್ಗಿಯಲ್ಲಿ ಅಗ್ರಿಕಲ್ಚರಲ್ ಹಬ್ ಮಾಡಲು 39 ಕೋಟಿ ವೆಚ್ಚ ಮಾಡಲಾಗುವುದು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಯಶವಂತ್ ಮತ್ತು ಪ್ರಮುಖರು ಉಪಸ್ಥಿತರಿದ್ದರು ಎಂದಿದ್ದಾರೆ.

Exit mobile version