ಡಿವೈಡರ್‌ಗೆ ಬಸ್ ಡಿಕ್ಕಿ

0
17

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಅಪಘಾತದಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಶಶಿ ಸಾಲಿ `ಕ್ಲಿಕ್’ ಚಮತ್ಕಾರ ಪ್ರತಿಭೆ
Next articleಸುರೇಶ್ ಸಜ್ಜನ್ ನಾಮಪತ್ರ ವಾಪಸ್..?