ಡಿಸಿಎಂ ಡಿಕೆಶಿ ನೇತೃತದಲ್ಲಿ ರಾಜಭವನ ಚಲೋ

0
24

ಬೆಂಗಳೂರು: ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ವಾಮ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಭವನ್ ಚಲೋ ಆರಂಭವಾಗಿದ್ದು ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ, ವಿಪಕ್ಷಗಳ ನಡೆಯನ್ನು ಖಂಡಿಸಿದರು.ವಿ ಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ಪಕ್ಷದ ನಾಯಕರು ‘ರಾಜಭವನ ಚಲೋ’ ಮೆರವಣಿಗೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್​ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್​ ನಾಯಕರು ರಾಜಭವನ ಚಲೋ ಮೂಲಕ ಆಗ್ರಹಿಸಲಿದ್ದಾರೆ.

Previous articleಭಾರತದ ಸರ್ವೋಚ್ಚ ನ್ಯಾಯಾಲಯ 75 ವರ್ಷಗಳ ಸ್ಮರಣಾರ್ಥ ಅಂಚೆಚೀಟಿ, ನಾಣ್ಯ ಬಿಡುಗಡೆ
Next articleಬಳ್ಳಾರಿ ಸೆಂಟ್ರಲ್ ಜೈಲಿಗೆ ಡಿಐಜಿ ಟಿ.ಪಿ.ಶೇಷ