ಡಿಸಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ

0
7

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿಯೇ ವ್ಯಕ್ತಿಯೋರ್ವ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.
ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕೊಪ್ಪದ(೨೩) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತನು ಕುಡಿಯುವ ನೀರಿನ ಬಾಟಲಿಯೊಳಗೆ ವಿಷ ಹಾಕಿಕೊಂಡು ಬಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲೇ ಇದ್ದ ಸಿಬ್ಬಂದಿ ಕೂಡಲೇ ವಿಷ ಕುಡಿದ ವ್ಯಕ್ತಿಯನ್ನು ಬಿಮ್ಸ್‌ಗೆ ದಾಖಲಿಸಿದ್ದಾರೆ. ಅದರೆ ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾರ್ಕೇಟ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous articleಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಸಾವು
Next articleಮೋದಿಯವರ ಯೋಜನೆ ಲಾಭ ಪಡೆದವರಲ್ಲಿ ಮುಸ್ಲೀಂ ಮಹಿಳೆಯರು ಹೆಚ್ಚಿದ್ದಾರೆ