ಬೆಂಗಳೂರು: ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಹೇಳಿದ್ದಾರೆ.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿರುವ ಅವರು ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸರಕಾರ ಡೆಂಗ್ಯುಗೆ ದರ ನಿಗದಿ ಮಾಡಿದೆ. ಡಯೋಗ್ನಾಸಿಸ್‌ಗಳು ಹೆಚ್ಚು ವಸೂಲಿ ಮಾಡಿದರೆ, ಅವುಗಳ ಬಾಗಿಲು ಮುಚ್ಚಿಸಬೇಕು. ಡೆಂಗ್ಯು ಹರಡಲು ಕಾರಣ ಮಳೆಗಾಲದಲ್ಲಿ ನೀರು ನಿಲ್ಲೋದರಿಂದ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತಿವೆ. ಈಡಿಸ್ ಈಜಿಪ್ಟೈ ಸೊಳ್ಳೆಯಿಂದ ಕಾಯಿಲೆ ಹರಡುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಬೇಕು. ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮಳೆಗಾಲ ಆರಂಭವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ. ಈಗ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರ ಮತ್ತು ಸಾರ್ವಜನಿಕರು ಇಬ್ಬರದ್ದೂ ಜವಾಬ್ದಾರಿ ಇದೆ, ಡೆಂಗ್ಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರ್ತಿದೆ. ಶಾಲೆಗಳಿಗೆ ಸರ್ಕ್ಯೂಲರ್ ಹೊರಡಿಸಬೇಕು. ಮಕ್ಕಳಲ್ಲಿ ಆರೋಗ್ಯ ಹದಗೆಟ್ಟಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಎಂದು ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.






















