ಡೆತ್‌ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

0
26

ಗದಗ: ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಶಿಧರ್ ಹಟ್ಟಿ ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಅವರಿಗೆ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಅಂತ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಬದಲಾದ ಸಿಎಂ ಡಿಪಿ
Next articleಕೋಟಿಗಳ ಲೆಕ್ಕದಲ್ಲಿ ಭರವಸೆ ನೀಡಿ, ಲಕ್ಷಗಳ ಲೆಕ್ಕದಲ್ಲಿ ನೀಡಿದ್ದು ಸಾಧನೆಯೇ…