Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ತಕ್ಷಣ ಮಳೆಹಾನಿ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

ತಕ್ಷಣ ಮಳೆಹಾನಿ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

0
57

ಕಾರವಾರ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.
ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌ ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಿದರು. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು ಎಂದರು‌.
ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿಪಂ ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Previous articleಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ
Next articleಶ್ರೀವ್ಯಾಸರಾಜ ವಿದ್ಯಾಪೀಠ ನಿರ್ಮಾಣಕ್ಕೆ ಭೂಮಿಪೂಜೆ