ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ

0
6

ಬೆಂಗಳೂರು: ಸಿದ್ದರಾಮಯ್ಯನವರೇ ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸರಣಿ ಪ್ರಶ್ನೆ ಮಾಡಿದ್ದಾರೆ.

•ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು?

•ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು?

•ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ?

•ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ?

•ನನ್ನ ಪ್ರಶ್ನೆ; ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ.

•ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ?

•ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ.. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದಿದ್ದಾರೆ.

Previous articleಲೆಹರ್ ಸಿಂಗ್ ಮಾಡಿರುವ ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ
Next articleಮುಧೋಳ ನಗರಸಭೆ: ಕೈ ಕಿಲಕಿಲ, ಕಮಲ ವಿಲವಿಲ..