ತಮಿಳಿನಿಂದ ಕನ್ನಡ ಹುಟ್ಟಿತು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

0
26

ಬೆಂಗಳೂರು: ತಮಿಳು ನಟ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ನಗರದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ ನಟ ಶಿವರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದ್ದಾರೆ. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಕೆಂಡ ಕಾರಿದ್ದಾರೆ, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಕಮಲ್ ಹಾಸನ್​ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous articleನಮ್ಮ ರಾಜ್ಯದಲ್ಲಿನ ಆಸ್ತಿಯನ್ನು ಸರ್ಕಾರ ಕಾಪಾಡಲಿದೆ
Next articleಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಖ್ಯಾತ ನಟ ಅನಂತ್​ ನಾಗ್​