Home ತಾಜಾ ಸುದ್ದಿ ನಟ ವಿಜಯ ಹೊಸ ಪಕ್ಷ ಘೋಷಣೆ

ನಟ ವಿಜಯ ಹೊಸ ಪಕ್ಷ ಘೋಷಣೆ

0

ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.
ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ಯಾವ ಪಕ್ಷವನ್ನೂ ಬೆಂಬಲಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ನಾನು ಈಗಾಗಲೇ ಒಪ್ಪಿಕೊಂಡಿರುವ ಚಿತ್ರಗಳನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ. ಆ ಬಳಿಕ ಸಾರ್ವಜನಿಕ ಸೇವೆ, ರಾಜಕೀಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇನೆ. ತಮಿಳುನಾಡಿನ ಜನತೆಗೆ ನಾನು ನೀಡುತ್ತಿರುವ ಕೃತಜ್ಞತೆ ಇದು ಎಂದು ಭಾವಿಸುತ್ತೇನೆ ಎಂದಿದ್ದಾರೆ.

Exit mobile version