ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0
25

ಮಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುನೀರ್ ಯಾನೆ ಅಣ್ಣ ಮುನೀರ್(೪೮) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಾ. ೪ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈತನು ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಳವು, ಕೊಲೆಗೆ ಯತ್ನ, ದರೋಡೆಗೆ ಯತ್ನ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು.

Previous articleಆಟೋದಲ್ಲಿ ಮಾದಕ ವಸ್ತು ಸಾಗಾಟ: ಆರೋಪಿ ಸೆರೆ
Next articleಆಟೋದಲ್ಲಿ ಮಾದಕ ವಸ್ತು ಸಾಗಾಟ: ಆರೋಪಿ ಸೆರೆ