Home ಅಪರಾಧ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

0

ಬೆಳಗಾವಿ: ಪೊಲೀಸ್ ಪೇದೆಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಸಭಾಭವನದ ಬಳಿ ನಡೆದಿದೆ.
ಬಸನಗೌಡ ಗೌಡರ(೪೦) ಎಂಬಾತ ಸೋಮವಾರ ತಡರಾತ್ರಿ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ಎನ್ನಲಾಗಿದೆ. ನಾಲ್ಕು ವರ್ಷದ ಹಿಂದೆ ಬೈಲಹೊಂಗಲ ಠಾಣೆಯಿಂದ ಅಥಣಿ ಠಾಣೆಗೆ ವರ್ಗವಾಗಿ ಈಗ ಕಳೆದ ಕೆಲ ತಿಂಗಳಿನಿಂದ ದೊಡವಾಡ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹಾಗೂ ಕೆಲ ದಿನಗಳಿಂದ ಗೈರು ಹಾಜರಿಯಲ್ಲಿ ಇದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version