ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಕ್ರಮ

0
26

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ. ಒದಗಿಸಿದ್ದಾರೆ.
ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಅವಶ್ಯವಿರುವ ಉಪಕರಣಗಳನ್ನು ನೀಡಲಾಗುವುದು. ನವೀನ ಡಿಜಿಟಲ್ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆಗಳನ್ನು ಬಲಪಡಿಸಲಾಗುವುದು. ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್‌ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳನ್ನು ವಿತರಣೆ ಮಾಡಲಾಗುವುದು ಎಂದಿದ್ದಾರೆ.
ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು. ರಾಜ್ಯದಲ್ಲಿ ಸಂಭವಿಸುವ ತಾಯಿ ಮರಣವನ್ನು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್‌ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡಿಸಲಾಗುವುದು. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Previous articleಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ
Next articleಬರೋಬ್ಬರಿ ಮೂರುವರೆ ಗಂಟೆ ಬಜೆಟ್‌ ಮಂಡನೆ