ತುರ್ತು ಪರಿಸ್ಥಿತಿ ಬಗ್ಗೆ ಅರಿವಿದೆಯೇ?

0
14

ಭ್ರಷ್ಟಾಚಾರದಲ್ಲಿ ಮುಳುಗಿರುವ ತಮಗೆ ರಾಜ್ಯದಲ್ಲಿ ತಲೆ ಎತ್ತಿರುವ ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಅರಿವಿದೆಯೇ?

ಬೆಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಅರಿವಿದೆಯೇ? ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಡೆಂಘೀ ನಿಯಂತ್ರಣದಲ್ಲಿ ರಾಜ್ಯ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣ ವಿಫಲವಾಗಿದ್ದು, ಸೋಂಕಿತರ ಸಂಖ್ಯೆ 17,000 ಗಡಿ ದಾಟಿರುವುದು ಚಿಂತಾಜನಕ ವಿಷಯವಾಗಿದೆ. ಸಿಎಂ ಸಿದ್ದರಾಮಯ್ಯನವರೇ, ಭ್ರಷ್ಟಾಚಾರದಲ್ಲಿ ಮುಳುಗಿರುವ ತಮಗೆ ರಾಜ್ಯದಲ್ಲಿ ತಲೆ ಎತ್ತಿರುವ ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಅರಿವಿದೆಯೇ? ಆರೋಗ್ಯ ಸಚಿವರನ್ನ, ಹಿರಿಯ ಅಧಿಕಾರಿಗಳನ್ನ ಕರೆಸಿ ಸಭೆ ಮಾಡಿ ಸೋಂಕು ನಿಯಂತ್ರಣದ ಬಗ್ಗೆ ಪರಿಶೀಲನೆ ನಡೆಸಿ. ತಮ್ಮ ಕೈಯಲ್ಲಿ ಆಡಳಿತ ನಡೆಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ ಎಂದಿದ್ದಾರೆ.

Previous articleಸಿಎಂ ಮೌನ ನೋವು ತಂದಿದೆ…
Next articleಅವರು ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ…