Home ತಾಜಾ ಸುದ್ದಿ ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟಂತಾಗಿದೆ…

ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟಂತಾಗಿದೆ…

0

ರಾಜ್ಯದ 43 ನಗರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿರುತ್ಸಾಹ ತೋರುತ್ತಿರುವ ರಾಜ್ಯ ಸರ್ಕಾರದ ಧೋರಣೆಯಿಂದ ರಾಜ್ಯದ 43 ನಗರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಕೇಂದ್ರ ಸರ್ಕಾರದಿಂದ ಬರಬೇಕಿದ್ದ 4,000 ಕೋಟಿ ರೂಪಾಯಿ ಅನುದಾನ ಪಡೆಯುವಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ.

ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟಂತೆ ಎಂಬ ಗಾದೆ ಮಾತಿನಂತೆ, ಈಗಾಗಲೇ ಮೂಡಾ ಹಗರಣದಲ್ಲಿ ಸಿಲುಕಿ ಚಡಪಡಿಸುತ್ತಿರುವ ಸಿಎಂ ಆಪ್ತ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಮಾಡಲು ಕೆಲಸವೇ ಇಲ್ಲದಂತಾಗಿದೆ ಎಂದಿದ್ದಾರೆ.

Exit mobile version