ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

0
8

ವಿಜಯಪುರ: ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
ಸಾತ್ವಿಕ್ ಮುಜಗೊಂಡ ಎಂಬಾತನೇ ತೆರೆದ ಕೊಳವೆ ಬಾವಿಗೆ ಬಿದ್ದ ಮಗು. ಸಂಜೆ ಸಮಯದಲ್ಲಿ ಆಟವಾಡಲು ಹೋಗಿದ್ದ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ.
ಸದ್ಯ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸುಮಾರು 500 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು, ಕೊಳೆವೆ ಬಾವಿಗೆ ಬಿದ್ದಿರೋ ಸಾತ್ವಿಕ್ 16 ರಿಂದ 20 ಅಡಿ ಆಳದಲ್ಲಿ ಸಿಲುಕಿದ್ದಾಗಿ ಮಾಹಿತಿ ಲಭ್ಯವಾಗಿದೆ.

Previous articleರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿಗೆ ಹೋಗಲ್ಲ
Next articleಜೂನ್ 4ರ ನಂತರ ರಾಜ್ಯ ಸರ್ಕಾರದ ದಿನಗಣನೆ ಆರಂಭ