Home ಅಪರಾಧ ದಂಪತಿಗೆ ಬಸ್ ಡಿಕ್ಕಿ : ಪತಿ ಸಾವು

ದಂಪತಿಗೆ ಬಸ್ ಡಿಕ್ಕಿ : ಪತಿ ಸಾವು

0
77

ಕಾಪು : ಮಂಗಳೂರು ಉಡುಪಿ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ, ರಸ್ತೆ ಬದಿಯ ಹೊಟೇಲ್‌ಗೆ ತೆರಳುತ್ತಿದ್ದ ದಂಪತಿಗೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಪತಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ಮೂಳೂರು ಮಂಗಳಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಕಾಪು ಕಲ್ಯ ಭಾರತ್‌ನಗರ ನಿವಾಸಿ ಹಿದಾಯತುಲ್ಲಾ (೫೭) ಮೃತ ಪಟ್ಟಿದ್ದು, ಅವರ ಪತ್ನಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಇಬ್ಬರಿಗೂ ಗಾಯಗಳಾಗಿದ್ದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕೂಡಲೇ ಅಂಬುಲೆನ್ಸ್‌ನಲ್ಲಿ ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತೀವ್ರ ಗಾಯಗೊಂಡಿದ್ದ ಹಿದಾಯತುಲ್ಲಾ ಅವರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವುದಾಗಿ ಎಂದು ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.