ಸಿಯೋಲ್: ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ʼಜೆಜು ಏರ್ʼ ವಿಮಾನ ಅಪಘಾತಕ್ಕೀಡಾಗಿ ಅದರಲ್ಲಿದ್ದ 179 ಜನರು ಮೃತಪಟ್ಟಿದ್ದಾರೆ.
ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಈ ಘಟನೆ ನಡೆದಿದೆ. ವಿಮಾನ ರನ್‌ವೇಯಿಂದ ಸ್ಕಿಡ್ ಆಗಿದ್ದು ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಈ ವಿಮಾನದಲ್ಲಿ 6 ಸಿಬ್ಬಂದಿ ಸೇರಿದಂತೆ 181 ಜನರು ಪ್ರಯಾಣಿಸುತ್ತಿದ್ದರು. ಬ್ಯಾಂಕಾಕ್‌ನಿಂದ 175 ಪ್ರಯಾಣಿಕರನ್ನು ಹೊತ್ತು ದಕ್ಷಿಣ ಕೊರಿಯಾದ ಜಿಯೊಲ್ಲಾ ಪ್ರಾಂತ್ಯದ ಕರಾವಳಿ ಭಾಗದಲ್ಲಿರುವ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ಆದ್ರೆ ರನ್‌ವೇಯಿಂದ ಇಳಿದು ಪತನಗೊಂಡಿದೆ.
ಪಕ್ಷಿಗಳೊಂದಿಗೆ ಘರ್ಷಣೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಅಪಘಾತಕ್ಕೆ ಕಾರಣವೆಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿಯವರೆಗೆ ಒಬ್ಬ ಫ್ಲೈಟ್ ಅಟೆಂಡೆಂಟ್ ಮತ್ತು ಒಬ್ಬ ಪ್ರಯಾಣಿಕನನ್ನು ರಕ್ಷಿಸಲಾಗಿದೆ ಎಂದು ದಕ್ಷಿಣ ಕೊರಿಯಾದ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.
