ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೆಡಿಎಸ್​ನಿಂದ ಬಿ ಫಾರಂ

0
10

ಮೇ 12ರಂದು ಬಿಜೆಪಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ. ನಿಂಗರಾಜ್ ಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿ ಬಿ ಫಾರಂ ನೀಡಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕರಾದ ಜಿಟಿ ದೇವಗೌಡರ ಸಮ್ಮುಖದಲ್ಲಿ ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ ಬಿ ಫಾರಂ ನೀಡಿದ್ದಾರೆ. ಮಂಡ್ಯದ ವಿವೇಕಾನಂದ ಅವರಿಗೆ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸಿದ್ದಾರೆ. ಬಿಜೆಪಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ. ಮೇ 12ರಂದು ಬಿಜೆಪಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ. ನಿಂಗರಾಜ್ ಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

Previous articleಲಿಫ್ಟ್ ಕುಸಿತ: ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಜೋಶಿ
Next articleಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ