ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ

0
15

ಬೆಂಗಳೂರು: 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಮಜನ್ಮಭೂಮಿ ಹೋರಾಟಕ್ಕೆ ಸಂಬಂಧಿಸಿದ 31 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿದ್ದಾಯ್ತು, ಈಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಈ ನೀಚ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ.ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ ಹಿಂದೂ ಪರ ಧ್ವನಿ ಅಡಗಿಸುವ ನಿಮ್ಮ ಪ್ರಯತ್ನ ಫಲ ಕೊಡುವುದಿಲ್ಲ ಸಿಎಂ
ಸಿದ್ದರಾಮಯ್ಯ ಅವರೇ. ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ, ಕಿರುಕುಳವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

Previous articleಕಡಲತೀರದಲ್ಲಿ ಮೋದಿ
Next articleರಾಜಕೀಯ ದ್ವೇಷಕ್ಕೆ ತತ್ಸಮಾನ ಪದವೇ “ಕಾಂಗ್ರೆಸ್”