ನೋಟು ಪ್ರಿಂಟ್ ಮಾಡಲು ಬಳಸುತ್ತಿದ್ದ ಪ್ರಿಂಟರ್, ಮೇಜರ್ಮೆಂಟ್ ಕಟಿಂಗ್ ಸ್ಕೇಲ್ ಸೇರಿದಂತೆ ಎಲ್ಲಾ ರೀತಿಯ ವಸ್ತು ಪೊಲೀಸರ ವಶ
ಮೈಸೂರು: ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ತಂದೆ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಹಿರಿಯೂರು ಗ್ರಾಮದ ನಾಗೇಶ್ (25) ಹಾಗೂ ಶಿವಪ್ರಸಾದ್ (48) ಬಂಧಿತ ಆರೋಪಿಗಳು. ಕೊಟ್ಟಿಗೆಯಲ್ಲಿದ್ದ ನೋಟು ಪ್ರಿಂಟ್ ಮಾಡಲು ಬಳಸುತ್ತಿದ್ದ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.