ದಲಿತರ, ಸವರ್ಣೀಯರ ನಡುವೆ ಮಾರಾಮಾರಿ

0
34

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಚಾಳಕಾಪೂರ್ ಗ್ರಾಮದಲ್ಲಿ ಶ್ರೀ ಹುಮಮಾನ ಮಂದಿರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ದಲಿತರ ಮತ್ತು ಸವರ್ಣೀಯರ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಒಟ್ಟು ೭೫ ಜನರ ವಿರುದ್ಧ ದೂರು ದಾಖಲಾಗಿದ್ದು ೧೫ ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಈ ಘಟನೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ಬೆಳಕಿಗೆ ಬಂದಿದೆ. ಘಟನೆಯಲ್ಲಿ ೧೦ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಖಟಕ್ ಚಿಂಚೋಳಿ ಠಾಣೆಯ ಪಿಎಸ್‌ಐ ರಾಚಯ್ಯ ಮಠಪತಿ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Previous articleಎಡನೀರು ಶ್ರೀಗಳ ಮೇಲೆ ದಾಳಿಗೆ ಯತ್ನ: ವ್ಯಾಪಕ ಖಂಡನೆ
Next articleಕಾಂಗ್ರೆಸ್ ಸೈನ್ಯಕ್ಕೆ ಬಿಟಿಪಿಎಸ್ ರಹದಾರಿ