Home ತಾಜಾ ಸುದ್ದಿ ದಲಿತ ಸಿಎಂ ಹೈಕಮಾಂಡ್ ವಿವೇಚನೆಗೆ ಬಿಟ್ಟದ್ದು

ದಲಿತ ಸಿಎಂ ಹೈಕಮಾಂಡ್ ವಿವೇಚನೆಗೆ ಬಿಟ್ಟದ್ದು

0

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ

ಹುಬ್ಬಳ್ಳಿ: ದಲಿತ ಸಿಎಂ ಆಗಬೇಕೋ, ಬೇಡವೋ ಎಂಬುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಸಿಎಲ್‌ಪಿ ಸಭೆಯಲ್ಲಿ ನಾನು ಯಾರ ಪರವಾಗಿ ಕೈ ಎತ್ತುತ್ತೇನೋ ಆಗ ನಾನು ಯಾರ ಬೆಂಬಲಿಗೆ ಎಂಬುದು ತಿಳಿಯುತ್ತದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯ ಬದಲಾವಣೆ, ದಲಿತ ಸಿಎಂ ವಿಚಾರ ಕೇವಲ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಸಿಎಲ್ ಪಿ ಸಭಯಲ್ಲಿ ಚರ್ಚೆಯಾದಾಗ ಮಾತ್ರ ಅದಕ್ಕೆ ಬೆಲೆ‌ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ‌. ಈ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ. ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಸತೀಶ ಜಾರಕಿಹೊಳಿ ಅವರು ಏನೇ ಮಾತಾಡಿದ್ದರೂ ಅದು, ಅವರ ವೈಯಕ್ತಿಕ ವಿಚಾರ. ಅವರ ಅಭಿಪ್ರಾಯದ ಬಗ್ಗೆ ಅವರನ್ನೇ ಪ್ರಶ್ನಿಸಿ ಎಂದರು.

ಯಾವುದೋ ಒಂದು ಘಟನೆ ಇಟ್ಟುಕೊಂಡು ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎನ್ನಲು ಸಾಧ್ಯವಿಲ್ಲ. ಬೀದರ್ ನಲ್ಲಿ ದರೋಡೆ ಪ್ರಕರಣ ನಡೆಯಬಾರದಿತ್ತು. ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ. ಎಲ್ಲ ಸರ್ಕಾರಗಳಲ್ಲೂ ಅಪರಾಧ ಕೃತ್ಯಗಳು ನಡೆಯುತ್ತವೆ. ಅಮೆರಿಕ, ಲಂಡನ್ ನಲ್ಲೂ ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದರು.

ನಾಳೆ ರಣದೀಪ್ ಸುರ್ಜೆವಾಲ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಜ.21ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡುತ್ತಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈ ಭಾಗದ ಮುಖಂಡರ ಸಭೆಯನ್ನು ಶನಿವಾರ ನಡೆಸಲಿದ್ದೇವೆ ಎಂದರು.

Exit mobile version