ದಸರಾ ಉದ್ಘಾಟನೆ: ಸಾಹಿತಿ ಹಂಪನಾಗೆ ಅಧಿಕೃತ ಆಹ್ವಾನ

0
9

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಈ ಬಾರಿಯ ನಾಡಹಬ್ಬ ಅ.3ರಿಂದ 12ರವರೆಗೆ ನಡೆಯಲಿದ್ದು, ಹಂಪನಾ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ ಮೈಸೂರು ಪೇಟ ತೋಡಿಸಿ, ಫಲಪುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು.

Previous articleಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
Next articleಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಹೇಳುವುದಿಲ್ಲ