ಬೆಂಗಳೂರು: ದೇಶದ ಇತರೆ ರಾಜ್ಯಗಳಲ್ಲಿ ಸಹ ನಂದಿನಿ ಮಳಿಗೆ ತೆರೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ರಾಜಧಾನಿ ದಿಲ್ಲಿಯಲ್ಲಿ ಉದ್ಘಾಟನೆಯಾಗಲಿದ್ದು, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳು ಸರಬರಾಜಾಗಲಿವೆ. ಗುಣಮಟ್ಟದ ಉತ್ಪನ್ನಗಳಿಗೆ ಹೆಸರಾಗಿರುವ ನಂದಿನಿ, ದೇಶದ ಇತರೆ ರಾಜ್ಯಗಳಲ್ಲಿ ತನ್ನ ಮಳಿಗೆಗಳನ್ನು ತೆರೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದಿದ್ದಾರೆ.