ಬೆಂಗಳೂರು: ದಿ. ಎಸ್.ಆರ್ ಬೊಮ್ಮಾಯಿರವರ ಕಂಚಿನ ಪುತ್ಥಳಿ ಅನಾವರಣಗೊಂಡಿದೆ.
ಈ ಕುರಿತಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇಂದು ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ದಿ. ಎಸ್.ಆರ್ ಬೊಮ್ಮಾಯಿರವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಹಾಗೂ ಸರಕಾರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಕೊಠಡಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಪುತ್ಥಳಿ ಅನಾವರಣ ಮಾಡಲಾಯಿತು. ಈ ಸಂಧರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ , ಮಾಜಿ ಶಾಸಕ ಆರ್.ಬಿ.ಸಿರೆಣ್ಣವರ ಸೇರಿದಂತೆ ಹಲವಾರು ಮುಖಂಡರು ಹಾಗೂ ವಿಧ್ಯಾರ್ಥಿಗಳು ಸೇರಿದಂತೆ ದಿ.ಎಸ್.ಆರ್ ಬೊಮ್ಮಾಯಿರವರ ಅನುಯಾಯಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಎಂದಿದ್ದಾರೆ.