ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅಗಲಿ 11 ದಿನಗಳು ಕಳೆದಿದ್ದು. ಅವರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಇಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸಿದರು, ರಾಜ್ಯದ ಅಭಿವೃದ್ಧಿಗೆ ಎಸ್.ಎಂ. ಕೃಷ್ಣ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯವಾಗಿದ್ದು, ಅವರ ಬದುಕು ಹಾಗೂ ಸಾಧನೆಗಳು ನಮಗೆಲ್ಲಾ ಆದರ್ಶಪ್ರಾಯ ಎಂದರು.
