ದುಬೈ ರಸ್ತೆ ಅಪಘಾತದಲ್ಲಿ ಉಳ್ಳಾಲ ಯುವತಿ ಸಾವು

0
9

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ(28) ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಿಸಿದ್ದರು.
2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Previous articleಅಕ್ಕ ಕೆಫೆ ಲೋಗೋ ಅನಾವರಣ
Next articleದಿವಾಳಿ ಸರ್ಕಾರದಿಂದ ದೇವಸ್ಥಾನದ ದುಡ್ಡು ಹೊಡೆಯಲು ಬಿಡಲ್ಲ