ದುಷ್ಮನ್ ಕಹಾ ಹೈ ಅಂದ್ರೆ…

0
32

ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ.


ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತೃಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದಿದ್ದಾರೆ.

Previous articleರಸ್ತೆ ಅಪಘಾತ: ಖಾಸಗಿ ಉದ್ಯೋಗಿ ಕೈ ಜಖಂ
Next articleಪೋಲೆಂಡ್, ಉಕ್ರೇನ್‍ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ