ಬಿಜೆಪಿಯ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಪಲಿತಾಂಶ ಕುರಿತಂತೆ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು. ಐತಿಹಾಸಿಕ ಗೆಲುವನ್ನು ನೀಡಿದ್ದಕ್ಕಾಗಿ ದೆಹಲಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು ಮತ್ತು ಅಭಿನಂದನೆಗಳು. ನೀವು ನನಗೆ ನೀಡಿರುವ ಹೇರಳವಾದ ಆಶೀರ್ವಾದ ಮತ್ತು ಪ್ರೀತಿಗಾಗಿ ನಾನು ನಿಮ್ಮೆಲ್ಲರಿಗೂ ತುಂಬಾ ಕೃತಜ್ಞನಾಗಿದ್ದೇನೆ.
ದೆಹಲಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಇಲ್ಲಿನ ಜನರ ಜೀವನವನ್ನು ಉತ್ತಮಗೊಳಿಸಲು ತಮ್ಮ ಪಕ್ಷದ ಸರ್ಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಈ ಅದ್ಭುತ ಫಲಿತಾಂಶವನ್ನು ಸಾಧಿಸಿದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಪ್ರಧಾನಿ ಹೇಳಿದರು. ನಾವು ಇನ್ನೂ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಅದ್ಭುತ ಜನರಿಗೆ ಸೇವೆ ಸಲ್ಲಿಸುತ್ತೇವೆ ಎಂದಿದ್ದಾರೆ.